Breaking News

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಸಾಧ್ಯತೆ


ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ತುಸು ದುರ್ಬಲಗೊಂಡಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಚುರುಕುಗೊಂಡಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಇಂದು ಸಂಜೆಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ರಾಯಚೂರು ಮತ್ತು ಬಳ್ಳಾರಿಯಲ್ಲಿ ಬಿಸಿಲು ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆ ಪ್ರಮಾಣ ಕಡಿಮೆಯಾದರೂ ರಾಜ್ಯದ ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *