ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ (BJP) ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದನು. ಬೆಳ್ಳಾರೆ ಪೇಟೆಯಲ್ಲಿ ಇಂದು ತನ್ನ ಕೋಳಿ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ.
ಕಳೆದ ವಾರ 8 ಮಂದಿ ಯುವಕರ ತಂಡ ಒಬ್ಬ ಯುವಕನನ್ನು ಭೀಕರವಾಗಿ ಕೊಲೆ ಮಾಡಿತ್ತು. ಈ ಸಂಬಂಧ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news





