ದಾವಣಗೆರೆ: ‘ರಾಜ್ಯದ 105 ಕ್ಷೇತ್ರಗಳಲ್ಲಿ ಮುಸ್ಲಿಮರ ಪ್ರಾಬಲ್ಯವಿದ್ದು, ಅಂತಹ ಕಡೆಗಳಲ್ಲಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು’ ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಮನವಿ ಮಾಡಿದರು.
ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವದ ಅಂಗವಾಗಿ ನಗರದ ತಾಜ್ ಪ್ಯಾಲೇಸ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಅಲ್ಪಸಂಖ್ಯಾತರ ವಿಭಾಗ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ಗೋಹತ್ಯೆಯನ್ನು ಬಿಜೆಪಿ ಸರ್ಕಾರ ನಿಷೇಧಿಸಿದೆ. ಆದರೆ ಗೋ ಮಾಂಸವನ್ನು ತಿನ್ನುತ್ತೇವೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು. ಟಿಪ್ಪು ಜಯಂತಿಯನ್ನು ನಿಷೇಧಿಸುವ ಪ್ರಸ್ತಾಪ ಬಂದಾಗ ಸಿದ್ದು ಅದರ ವಿರುದ್ಧವಾಗಿ ನಿಂತರು’ ಎಂದು ನೆನಪಿಸಿಕೊಂಡರು. ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ನೀಡಿದ ಕಾರ್ಯಕ್ರಮಗಳು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನ ಒದಗಿಸಿರುವ ಬಗ್ಗೆ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





