ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ ನೆಟ್ಟಾರು ಕೊಲೆ ಹಿನ್ನಲೆ ಅವರಿಗೆ ಹಿಂದೂಸ್ತಾನ ಜನತಾ ಪಾರ್ಟಿ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ರಾಘವೇಂದ್ರ ಕಠಾರೆ ಹಿಂದುತ್ವ ಬಂದತಹ ಸಂಧರ್ಭದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು. ಸಿದ್ದು ರಾಯನಾಳ,ಮಂಜು ಎಂಟರವಿ,ವಿಜಯ ಮಾಮರಡಿ,ಸಂತೋಷ ಮೆಹರವಾಡೆ,ಕಿರಣ ಬಾಕಳೆ,ಮಂಜು ಕುಂಬಾರ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





