ಹುಬ್ಬಳ್ಳಿ : ರೈಲ್ವೇ ನಿಲ್ದಾಣದಲ್ಲಿ ವೃದ್ಧರೊಬ್ಬರು ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ .
ಸುಮಾರು 70 ರಿಂದ 75 ವರ್ಷದ ವೃದ್ಧರೊಬ್ಬರು ರೈಲ್ವೇ ನಿಲ್ದಾಣದ ಪ್ಲಾಟ್ ಫಾರ್ಮ್ 4 ರಲ್ಲಿ ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದ್ದಾರೆ.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಶವವನ್ನು ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನಿಸಿ ಮೃತಪಟ್ಟ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.ಈ ಸಂಬಂಧ ಹುಬ್ಬಳ್ಳಿಯ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





