Breaking News

ಪ್ರವೀಣ್‌ ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳು ಬಂಧನ


ಮಂಗಳೂರು; ಹಿಂದೂ ಸಂಘಟನೆ ಮುಖಂಡ ಪ್ರವೀಣ್‌ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾಸರಗೋಡಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಿಟ್ಲ ಪೊಲೀಸ್‌ ಠಾಣೆಗೆ ಅವರನ್ನು ಕರೆತರಲಾಗಿದೆ.ಶೀಘ್ರದಲ್ಲೇ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಹಮದ್‌ ಶಫೀಕ್‌, ಜಾಕೀರ್‌ ಸವಣೂರು ಎಂಬುವವರೇ ಬಂಧಕ್ಕೊಳಗಾಗಿರುವವರು. ಕಾಸರಗೋಡಿನಲ್ಲಿ ಈ ಇಬ್ಬರನ್ನು ಬಂಧಿಸಲಾಗಿದ ಎಂದು ದಕ್ಷಿಣ ಕನ್ನಡ ಎಸ್‌ಪಿ ರಿಷಿಕೇಶ್‌ ಹೇಳಿದ್ದಾರೆ. ಈ ಇಬ್ಬರೇ ಮಾಸ್ಟರ್‌ ಮೈಂಡ್‌ಗಳು ಎನ್ನಲಾಗಿದ್ದು, ಇವರ ನಿರ್ದೇಶನದ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಬಂಧಿತ ಇಬ್ಬರೂ ಆರೋಪಿಗಳು ಬೆಳ್ಳಾರೆ ಹಾಗೂ ಸವಣೂರಿನವರು ಎಂದು ಗೊತ್ತಾಗಿದೆ. ಆದ್ರೆ ಕೊಲೆ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಬಂಧಿಸಲಾಗಿರುವ ಇಬ್ಬರು ಆರೋಪಿಗಳು ಅಪರಾಧಿ ಹಿನ್ನೆಲೆಯವರಾಗಿದ್ದಾರೆ ಎಂದು ತಿಳಿದುಬಂದಿವೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *