Breaking News

ಫಾಜಿಲ್ ಹತ್ಯೆಗೆ ಸಿಎಂ ಬೊಮ್ಮಾಯಿ ನೇರ ಹೊಣೆ : ಮುನೀರ್ ಕಾಟಿಪಳ್ಳ


ಮಂಗಳೂರು: ಮುಖ್ಯಮಂತ್ರಿ ಭೇಟಿಯ ಬೆನ್ನಲ್ಲೇ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಹತ್ಯೆಗೆ ನೇರ ಹೊಣೆ ಮುಖ್ಯಮಂತ್ರಿ ಬೊಮ್ಮಾಯಿ. ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಭೇಟಿಯ ಸಂದರ್ಭ ತೋರಿದ ಸಾರ್ವಜನಿಕ‌ ಹೊಣೆಗೇಡಿತನವೇ ಕೊಲೆಗಡುಕರಿಗೆ ಧೈರ್ಯ ನೀಡಿದೆ‌ ಎಂದು ಡಿವೈಎಫ್‌ಐ ರಾಜ್ತ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಜಿಲ್ಲೆಯಲ್ಲಿ ನಡೆಯುತ್ತಿರುವ ಅಮಾಯಕರ ಸರಣಿ ಕೊಲೆಗಳಿಗೆ ಬೊಮ್ಮಾಯಿ ಸರ್ಕಾರವೇ ಕಾರಣ. ನಿರ್ಲಜ್ಜ ಕೋಮುವಾದಿ ಆಡಳಿತದ ಕರ್ನಾಟಕ ಮಾದರಿಯೊಂದನ್ನು ಬೊಮ್ಮಾಯಿ ನಿರ್ಮಿಸಿ ಬಿಟ್ಟರು. ಅವರಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಬಾರದು. ರಾಜಿನಾಮೆ ಕೊಟ್ಟು ನಿರ್ಗಮಿಸಲಿ ಎಂದು ಮುನೀರ್‌ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *