Breaking News

ಉಣಕಲ್ ಕೆರೆಯಲ್ಲಿ ಮಹಿಳೆ ಶವ : ಕೊಲೆಯೋ ಆತ್ಮಹತ್ಯೆಯೋ ?

ಹುಬ್ಬಳ್ಳಿ : ನಗರದ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಉಣಕಲ್ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಈಗಷ್ಟೇ ಪತ್ತೆಯಾಗಿದೆ . ಶುಕ್ರವಾರ ಉಣಕಲ್ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಸ್ಥಳೀಯರು , ಮಹಿಳೆಯ ಶವವನ್ನು ನೋಡಿ ವಿದ್ಯಾನಗರ ಠಾಣೆಯ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ .

ಕೂಡಲೇ ಸ್ಥಳಕ್ಕೆ ಆಗಮಿಸಿದ ವಿದ್ಯಾನಗರ ಠಾಣೆಯ ಪೊಲೀಸರು ಮಹಿಳೆಯ ಶವವನ್ನು ಕೆರೆಯಿಂದ ತೆಗೆದಿದ್ದು ಸುಮಾರು 30 ರಿಂದ 40 ವರ್ಷದ ವಯಸ್ಸಿನ ಮಹಿಳೆ ಎಂದು ಅಂದಾಜಿಸಲಾಗಿದ್ದು ಮಹಿಳೆ ಯಾರು ಎಂಬ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ . ಮಹಿಳೆಯ ಸಾವು ಕೊಲೆಯೋ ಆತ್ಮಹತ್ಯೆಯೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ಶವಾಗಾರಕ್ಕೆ ರವಾನಿಸಲಾಗಿದ್ದು ,

ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲು ಮುಂದಾಗಿದ್ದಾರೆ .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *