ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ದಾವಣಗೆರೆ, ಚಿತ್ರದುರ್ಗ,ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 5 ದಿನ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಆಗಸ್ಟ್ 1 ಹಾಗೂ 2 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





