ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,408 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 54 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,312ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,43,384 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.48ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,33,30,442 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 33,87,173 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,03,94,33,480 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,04,399 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





