ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 9.45ಕ್ಕೆ ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆಗೆ www.karresults.nic.in/ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದು, ನಂತರ ವೆಬ್ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಂಜಿನಿಯರಿಂಗ್, ಪಶು ಸಂಗೋಪನೆ, ಕೃಷಿ, ಆಯುಷ್, ಯುನಾನಿ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಜೂನ್ 16, 17ರಂದು ಸಿಇಟಿ ನಡೆಸಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news





