Breaking News

ಪೊಲೀಸ್ ಕಾಲರ್ ಹಿಡಿದು ರಂಪಾಟ ಮಾಡಿದ ಮಾಜಿ ಸಿಎಂ



ಭೋಪಾಲ್ : ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಪೊಲೀಸ್ ಕಾಲರ್ ಹಿಡಿದು ರಂಪಾಟ ಮಾಡಿರುವ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದಿಗ್ವಿಜಯ್ ಸಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ನಡುವೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಸಂಬಂಧಿಸಿದಂತೆ ತೀವ್ರ ಪೈಪೋಟಿ ನಡೆಯುತ್ತಿದೆ.

ಈ ನಡುವೆ ದಿಗ್ವಿಜಯ ಸಿಂಗ್ ಮತ್ತು ಶಾಸಕರಾದ ಆರಿಫ್ ಮಸೂದ್ ಮತ್ತು ಪಿಸಿ ಶರ್ಮಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭೋಪಾಲ್‍ನ ಜಿಲ್ಲಾ ಪಂಚಾಯತ್ ಕಚೇರಿಯ ಹೊರಗೆ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ.

ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಮತ್ತು ಆಡಳಿತ ವ್ಯವಸ್ಥೆ ಕೆಲಸ ಮಾಡುತ್ತಿದೆ ಎಂದು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಸಚಿವ ವಿಶ್ವಾಸ್ ಸಾರಂಗ್ ಅವರು ಕಾರಿನಿಂದ ಕೆಳಗಿಳಿದಾಗ ಕಾಂಗ್ರೆಸ್ ಬೆಂಬಲಿಗರು ಅವರನ್ನು ಸುತ್ತುವರಿದಿದ್ದಾರೆ. ಈ ವೇಳೆ ಸಾರಂಗ್ ಕಾಂಗ್ರೆಸ್ ಬೆಂಬಲಿಗರಿಗೆ ಈ ದಾದಾಗಿರಿ ಕೆಲಸ ನಡೆಯುವುದಿಲ್ಲ ಎಂದು ಹೇಳಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *