ಬೆಂಗಳೂರು : ಪ್ರವೀಣ್ ಹತ್ಯೆ ಪ್ರಕರಣವನ್ನ NIAಗೆ ಹಸ್ತಾಂತರ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ನಿರ್ಧಾರ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪ್ರವೀಣ್ ಹತ್ಯೆ ಕೇಸ್ ಒಂದು ವ್ಯವಸ್ಥಿತವಾಗಿ ನಡೆದಿರೋ ಹತ್ಯೆ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ ತ್ವರಿತಗತಿಯಾಗಿ ನಡೆಯುತ್ತಿದೆ. ಪ್ರಕರಣ 2 ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ NIAಗೆ ಲೆಟರ್ ಬರೆಯೋದಕ್ಕೆ ಹೇಳಿದ್ದೇನೆ. ಪ್ರಕರಣವನ್ನ NIAಗೆ ವಹಿಸಲು ತೀರ್ಮಾನಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





