ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ, ಪ್ರೌಢಶಾಲೆಯನ್ನು ಆರಂಭಿಸೋದಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ರಾಜ್ಯ ಸರ್ಕಾರದಿಂದ 95 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ ಬಾಗಲಕೋಟೆಯ ಎರಡು, ಬಳ್ಳಾರಿಯ 11, ಬೆಂಗಳೂರು ಸೌಥ್ ನ 3 ಶಾಲೆ, ಬೆಳಗಾವಿಯ ಐದು ಶಾಲೆಗಳು, ಬೆಳಗಾವಿ ಚಿಕ್ಕೋಡಿ ವಿಭಾಗದಿಂದ 7, ಬೆಂಗಳೂರು ನಾರ್ಥ್ ನ 2, ಚಾಮರಾಜನಗರ ಒಂದು, ಚಿತ್ರದುರ್ಗ ಒಂದು, ದಾವಣಗೆರೆ ಒಂದು, ಧಾರವಾಡ ಮೂರು, ಗದಗ ಎರಡು, ಹಾವೇರಿಯ 16 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಯಾಗಿ ಉನ್ನತೀಕರಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





