ಶಿವಸೇನಾ ಸಂಸದ ಸಂಜಯ್ ರಾವುತ್‌ಗೆ ಇಡಿ ಶಾಕ್ ನೀಡಿದೆ. ಭಾನುವಾರ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ಸಂಜಯ್ ರಾವುತ್ ಅವರ ಮುಂಬೈ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಸಂಸದರ ನಿವಾಸವನ್ನು ರೇಡ್ ಮಾಡಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪತ್ರ ‘ಚಾಲ್’ ಭೂ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯದ ಮೂರು ತಂಡಗಳು ಸಂಜಯ್ ರಾವುತ್ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಮನೆಯನ್ನು ಪರಿಶೀಲಿಸುತ್ತಿದೆ. ಅಲ್ಲದೆ, ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವುತ್ ಅವರನ್ನು ಪ್ರಶ್ನೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಸಂಸದರ ಮುಂಬೈ ನಿವಾಸ ಮಾಥ್ರವಲ್ಲದೆ ಇತರೆ ಹಲವು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





