ದಾವಣಗೆರೆ : ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದು, ರಾಜೀನಾಮೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಪಕ್ಷದ ಕಾರ್ಯಕರ್ತರಲ್ಲಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಾರ್ಯಕರ್ತರೆ ಪಕ್ಷದ ಶಕ್ತಿ’ ನಾನು ಕಾರ್ಯಕರ್ತರಲ್ಲಿ ಅತ್ಯಂತ ವಿನಯದಿಂದ ಮನವಿ ಮಾಡುತ್ತೇನೆ. ರಾಜೀನಾಮೆಯನ್ನು ವಾಪಸ್ ಪಡೆಯಬೇಕು, ನಾವು ನಿಮ್ಮೊಂದಿಗಿದ್ದೇವೆ ಎಂದು ಮನವಿ ಮಾಡುತ್ತೇನೆ ಎಂದುಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





