Breaking News

15ಕ್ಕೂ ಹೆಚ್ಚು ಜನರಿಗೆ ಜನರಿಗೆ ಚಾಕು ಇರಿದು ಗಾಯ

ಚಿಕ್ಕಬಳ್ಳಾಪುರ: ಅಪರಿಚಿತ ವ್ಯಕ್ತಿಯೊಬ್ಬ 15ಕ್ಕೂ ಅಧಿಕ ಮಂದಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ 10 ಗಂಟೆ ಸುಮಾರಿಗೆ ನಗರದಲ್ಲಿ ನಡೆದಿದೆ.

ಹೆಲ್ಮೆಟ್ ಧರಿಸಿ ಒಂದು ಕೈಯಲ್ಲಿ ಚಾಕು ಹಿಡಿದುಕೊಂಡು ವೇಗವಾಗಿ ಬೈಕ್ ಚಲಾಯಿಸಿಕೊಂಡಿ ಬಂದ ಅಪರಿಚಿತ ನಗರಸಭೆ, ಕಾರ್ಖಾನೆ ಪೇಟೆ, ಬಿಬಿ ರಸ್ತೆ, ಅಂಬಿಕಾ ಮೆಡಿಕಲ್ಸ್ ಮತ್ತಿತರ ಪ್ರದೇಶಗಳಲ್ಲಿ ನಿಂತಿದ್ದ ಹಲವರಿಗೆ ಇರಿದು ಪರಾರಿ ಆಗಿದ್ದಾನೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಬೆಂಗಳೂರಿನ‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಪೊಲೀಸರು ಅಪರಿಚಿತ ದುಷ್ಕರ್ಮಿಗಾಗಿ ಹುಡುಕಾಟ ನಡೆಸಿದ್ದಾರೆ. ಆರೋಪಿಯು ಮಾದಕ ದ್ರವ್ಯ ಸೇವಿಸಿದ್ದ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *