ಬೆಂಗಳೂರು : ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ವೈಫಲ್ಯವು ಅಭಿವೃದ್ಧಿಗೆ ಮಾರಕ. ಕಾನೂನು ಸುವ್ಯವಸ್ಥೆ ವೈಫಲ್ಯ ಕಾರಣವಾದವರು ಹಿಂದೂ, ಮುಸ್ಲಿಂ ಯಾರೇ ಇರಲಿ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತದೆ. ಬಂಡವಾಳ ಹೂಡಿಕೆಯೂ ಸಹಜವಾಗಿಯೇ ಹೆಚ್ಚಾಗಿ ಹರಿದು ಬರುತ್ತದೆ. ಆದರೆ, ಕಾನೂನು ಸುವ್ಯವಸ್ಥೆ ಸರಿಯಿಲ್ಲದಿದ್ದರೆ ಅಭಿವೃದ್ಧಿಗೆ ಮಾರಕವಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





