Breaking News

ಭಾರಿ ಹಣದೊಂದಿಗೆ ಸಿಕ್ಕಿ ಬಿದ್ದ 3 ಜನ ಶಾಕಕರು ಅಮಾನತು : ಕಾಂಗ್ರೆಸ್ ಆದೇಶ


ಕೋಲ್ಕತಾ: ಪಶ್ಚಿಮ ಬಂಗಾಳದ ಹೌರಾದಲ್ಲಿ ಭಾರಿ ಮೊತ್ತದ ಹಣದೊಂದಿಗೆ ಸಿಕ್ಕಿಬಿದ್ದ ಜಾರ್ಖಂಡ್‌ನ ಮೂವರು ಶಾಸಕರನ್ನು ಕಾಂಗ್ರೆಸ್ ಅಮಾನತುಗೊಳಿಸಿದೆ. ಪೊಲೀಸರು ಶನಿವಾರ (ಜುಲೈ 30) ನಿರ್ದಿಷ್ಟ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ, ಈ ಮೂವರು ಶಾಸಕರ ಕಾರನ್ನು ತಡೆದಿದ್ದಾಗ ಅದರೊಳಗೆ ಅಪಾರ ಪ್ರಮಾಣದ ಹಣ ಪತ್ತೆಯಾಗಿತ್ತು. ಈ ಹಣವು 48 ಲಕ್ಷ ರೂಪಾಯಿ ಎನ್ನಲಾಗಿದೆ.

ಶಾಸಕರಾದ ಇರ್ಫಾನ್ ಅನ್ಸಾರಿ, ರಾಜೇಶ್ ಕಚ್ಚಪ್ ಮತ್ತು ನಮನ್ ಬಿಕ್ಸಲ್ ಕೊಂಗಾರಿ ಅವರು ಪ್ರಯಾಣಿಸುತ್ತಿದ್ದ ಎಸ್‌ಯುವಿಯನ್ನು ಪಂಚಲಾ ಪೊಲೀಸ್ ಠಾಣಾ ವ್ಯಾಪ್ತಿಯ ರಾನಿಹಟಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ-16 ರಲ್ಲಿ ಪಶ್ಚಿಮ ಬಂಗಾಳ ಪೊಲೀಸರು ತಡೆದು ಪರಿಶೀಲನೆ ನಡೆಸಿದಾಗ ಹಣ ಪತ್ತೆಯಾಗಿತ್ತು.

ಇದು ಭಾರಿ ಸುದ್ದಿಯಾಗುತ್ತಲೇ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಾರ್ಖಂಡ್ ಉಸ್ತುವಾರಿ ಅವಿನಾಶ್ ಪಾಂಡೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಮೂವರು ಶಾಸಕರನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿಸಿದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಮೂವರು ಶಾಸಕರನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಅಲ್ಲದೇ, ರಾಜ್ಯ ಸರ್ಕಾರವನ್ನು ಉರುಳಿಸಲು ಇರ್ಫಾನ್ ಅನ್ಸಾರಿ, ರಾಜೇಶ್ ಕಚ್ಚಪ್ ಮತ್ತು ನಮನ್ ವಿಕ್ಸಲ್ ಕೊಂಗಾಡಿ ಪಿತೂರಿ ನಡೆಸಿದ್ದಾರೆ ಎಂದು ಇವರ ವಿರುದ್ಧ ಆರೋಪಿಸಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *