Breaking News

ಡಿಕೆಶಿ ಪ್ರಕರಣ : ಸಿಬಿಐಗೆ ನೋಟಿಸ್ ಜಾರಿ

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಕೋರಿದ ಪ್ರಕರಣದಲ್ಲಿ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

‘ನನ್ನ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್‌ ರದ್ದುಗೊಳಿಸಬೇಕು’ ಎಂದು ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಸುನಿಲ್ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ ಮತ್ತು ಸಿ.ಎಚ್.ಜಾಧವ್‌, ‘ಅರ್ಜಿದಾರರ ವಿರುದ್ಧ 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆ-1988ರ ಕಲಂ 13 (2), 13 (1)(ಇ) ಅಡಿಯಲ್ಲಿ ದಾಖಲಿಸಲಾಗಿರುವ ಎಫ್‌ಐಆರ್‌ ಕಾನೂನು ಬಾಹಿರವಾಗಿದೆ’ ಎಂದು ಬಲವಾಗಿ ಆಕ್ಷೇಪಿಸಿದರು.

‘ಅರ್ಜಿದಾರರು ಕೃಷಿ ಕುಟುಂಬದವರಾಗಿದ್ದು, 1989ರಿಂದ ವಿಧಾನಸಭೆ ಸದಸ್ಯನಾಗಿ ಒಟ್ಟು ಏಳು ಬಾರಿ ಆಯ್ಕೆಯಾದ ಸಾರ್ವಜನಿಕ ಸೇವಕರಾಗಿದ್ದಾರೆ. ಈ ಪ್ರಕರಣದಲ್ಲಿ ಅವರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಕುಟುಂಬದ ಸದಸ್ಯರ ಹೆಸರನ್ನೂ ಸೇರ್ಪಡೆ ಮಾಡಿರುವುದು ತಪ್ಪು’ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *