Breaking News

ಮನೆಯ ಮೇಲೆ ಗುಡ್ಡ ಕುಸಿತ : 4 ಜನ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು, ಮನೆ ಸಂಪೂರ್ಣ ನೆಲಸಮವಾಗಿದೆ. ದುರಂತದಲ್ಲಿ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದುದೆ.

ಲಕ್ಷ್ಮಿ ನಾರಾಯಣ ನಾಯ್ಕ, ಮಗ ಅನಂತ ನಾರಾಯಣ ನಾಯ್ಕ್, ಮಗಳು ಲಕ್ಷ್ಮಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಜೆಸಿಬಿ ಮೂಲಕ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲಿಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Share News

About BigTv News

Check Also

ನಕಲಿ ದಾಖಲೆ ಮೂಲಕ ನಿವೇಶನ ಕಬಳಿಕೆ ; ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. …

Leave a Reply

Your email address will not be published. Required fields are marked *