ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಂದ ಮುಂಗಡವಾಗಿ ₹ 1.35 ಕೋಟಿ ಪಡೆದಿದ್ದ ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್, ಅದೇ ಹಣವನ್ನು ಎಡಿಜಿಪಿ ಅಮ್ರಿತ್ ಪೌಲ್ ಅವರಿಗೆ ನೀಡಿದ್ದರೆಂಬ ಸಂಗತಿಯನ್ನು ಸಿಐಡಿ ಅಧಿಕಾರಿಗಳು ದಾಖಲೆ ಸಮೇತ ಮುಂದಿಟ್ಟಿದ್ದಾರೆ.
ಡಿವೈಎಸ್ಪಿ ಸೇರಿ 30 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಸಿಐಡಿ, ಅವರೆಲ್ಲರ ಹೇಳಿಕೆಯನ್ನು ಲಗತ್ತಿಸಿದೆ.’545 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಸರ್ಕಾರ ಒಪ್ಪಿಗೆ ನೀಡುತ್ತಿದ್ದಂತೆ ಎಡಿಜಿಪಿ ಅಮ್ರಿತ್ ಪೌಲ್, ಡಿವೈಎಸ್ಪಿ ಶಾಂತಕುಮಾರ್ ಹಾಗೂ ಇತರರನ್ನು ಬಳಸಿಕೊಂಡು ಹಣ ಮಾಡುವ ದಾರಿ ಕಂಡುಕೊಂಡಿದ್ದರು. ಶಾಂತಕುಮಾರ್ ಅವರನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳನ್ನು ಸಂಪರ್ಕಿಸಿ, ಮುಂಗಡವಾಗಿ ₹ 1.35 ಕೋಟಿ ಸಂಗ್ರಹಿಸಿದ್ದರು. ಅದೇ ಹಣವನ್ನು ಎಡಿಜಿಪಿ ವಿವಿಧ ಖಾತೆಗಳಿಗೆ ಜಮೆ ಮಾಡಿಸಿಕೊಂಡಿದ್ದರು’ ಎಂಬ ಮಾಹಿತಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





