Breaking News

ಹುಬ್ಬಳ್ಳಿಗೆ ರಾಹುಲ್‌ ಗಾಂಧಿ ಭೇಟಿ : ಎಲ್ಲೆಡೆ ರಾರಾಜಿಸುತ್ತಿರುವ ಬ್ಯಾನರ್

ಹುಬ್ಬಳ್ಳಿ: ಕಾಂಗ್ರೆಸ್‌ ನಾಯಕ, ಸಂಸದ ರಾಹುಲ್‌ ಗಾಂಧಿ ಮಂಗಳವಾರ ಸಂಜೆ ಹುಬ್ಬಳ್ಳಿಗೆ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಅವರಿಗೆ ಸ್ವಾಗತ ಕೋರುವ ಬ್ಯಾನರ್‌, ಬಂಟಿಂಗ್ಸ್‌ಗಳು ರಾರಾಜಿಸುತ್ತಿವೆ. ಮುಖ್ಯವಾಗಿ ಗೋಕುಲ ರಸ್ತೆಯ ಉದ್ದಕ್ಕೂ ಕಣ್ಣಿಗೆ ರಾಚುತ್ತಿವೆ.

ರಾಹುಲ್‌ ಗಾಂಧಿ ಅವರು ದೆಹಲಿ ವಿಮಾನ ನಿಲ್ದಾಣದಿಂದ ಸಂಜೆ 5ಕ್ಕೆ ವಿಶೇಷ ವಿಮಾನದಲ್ಲಿ ಹೊರಟು ಸಂಜೆ 7.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ.

ವಿಮಾನ ನಿಲ್ದಾಣದ ಬಳಿಯಿರುವ ಫಾರ್ಚೂನ್‌ ಹೋಟೆಲ್‌ನಲ್ಲಿ ರಾತ್ರಿ 8 ಗಂಟೆಗೆ ನಡೆಯಲಿರುವ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಸಭೆಯ ನೇತೃತ್ವ ವಹಿಸಲಿದ್ದಾರೆ. ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *