Breaking News

ಬಿಜೆಪಿಯಿಂದ ಜನ ಬೇಸತ್ತು ಹೋಗಿದೆ, ಮತ್ತೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು : ಯು.ಟಿ.ಖಾದರ

ಹುಬ್ಬಳ್ಳಿ : ರಾಜ್ಯ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದು, ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೇ ಅಧಿಕಾರಕ್ಕೆ ಬರುವುದು ಖಚಿತ ‌ಎಂದು ಮಾಜಿ ಸಚಿವ ಯು.ಟಿ.ಖಾದರ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ವಿಮಾನ ನಿಲ್ದಾ ಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬರುವ ಮುಂಚೆ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳಿತ್ತು, ಆದರೇ ಬಿಜೆಪಿ ಅಧಿಕಾರ ಬಂದಾಗಿನಿಂದ ರಾಜ್ಯದಲ್ಲಿ ನಿರುದ್ಯೋಗ ಸೃಷ್ಟಿಯಾಗಿದೆ ಅಲ್ಲದೇ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದು, ಖಂಡನೀಯವಾಗಿದೆ. ರಾಜ್ಯ ಸರ್ಕಾರದ ಈ ವಿಷಯಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಜರುಗಿಸಬೇಕು ಆಗ್ರಹಿಸಿದರು.
ಇಂತಹ ಘಟನೆಗೆ ಸಂಬಂಧಿಸಿದಂತೆ ಅಂತ್ಯ ಹಾಡುವಂತಹ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದ್ದು, ಸಮಾಜಘಾತುಕ ಶಕ್ತಿಗಳಿಗೆ ಕಠಿಣ ಶಿಕ್ಷೆ ನೀಡಬೇಕಿದೆ ಎಂದರು.

ಇನ್ನೂ ಕಾರ್ಯಕರ್ತರು, ಜನ ಸಾಮಾನ್ಯರು ಹಾಗೂ ಯುವ ಜನತೆಯ ದಾರಿ ತಪ್ಪಿಸುವಂತಹ ಕೆಲಸ ಮಾಡಬಾರದು ಎಂದ ಅವರು, ಮುಖ್ಯಮಂತ್ರಿಗಳು ಒಬ್ಬರಿಗೆ ಪರಿಹಾರ ಕೊಟ್ಟರೆ ಇನ್ನೊಬ್ಬರಿಗೆ ಪರಿಹಾರ ಕೊಡುವುದಿಲ್ಲ, ಒಬ್ಬರ ಮನಗೆ ಹೋದರೆ ಇನ್ನೊಬ್ಬರ ಮನೆಗೆ ಹೋಗುವುದಿಲ್ಲ ಆದ್ದರಿಂದ ತಾರತಮ್ಯ ನೀತಿ ಮಾಡುವುದು ಸರಿಯಲ್ಲ ಇದನ್ನು ಯಾರು ಒಪ್ಪುವುದಿಲ್ಲ ದೂರಿದರು.

ರಾಜ್ಯ ಸರ್ಕಾರ   ಸರಿಯಾದ ನಿಲುವನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದು,  ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ   ಬದ್ಧತೆ ಹಾಗೂ ಸ್ಪಷ್ಟತೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ೭೫ ನೇ ಜನ್ಮದಿನಾಚರಣೆ ಅಂಗವಾಗಿ ಅಮೃತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾಂಗ್ರೆಸ್ ನ ಏಕತೆ ಹಾಗೂ ಒಗ್ಗಟ್ಟಿನ ಸಮಾವೇಶ ಇದಾಗಿದೆ ಎಂದರು.

ಹುಬ್ಬಳ್ಳಿಯಲ್ಲಿ ನಡೆಯುವಂತಹ ಐತಿಹಾಸಿಕ ಸಭೆಯು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಜನ ಸಾಮಾನ್ಯರ ಬಿಜೆಪಿ ಧಕ್ಕೆ ಉಂಟು ಮಾಡಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಮೇಲಿನ ಜನರ ಪ್ರೀತಿ ನಂಬಿಕೆ ರಾಹುಲ್ ಗಾಂಧಿ ಆಗಮನ ಪಕ್ಷಕ್ಕೆ ಶಕ್ತಿ ತುಂಬಲಿದೆ. ಸಮಾವೇಶಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಯಾವ ವರ್ಗಕ್ಕೂ ಅನುಕೂಲವಿಲ್ಲ ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಬರವುದು ಖಚಿತ ಎಂದು ನುಡಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *