:
ಹುಬ್ಬಳ್ಳಿ : ನಗರದ ಖಾಸಗಿ ಹೊಟೆಲ್ ನಲ್ಲಿ ಮಂಗಳವಾರ ಮಧ್ಯರಾತ್ರಿ ಕೇಕ್ ಕತ್ತರಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನವನ್ನು ಆಚರಿಸಲಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಕೆ.ಜೆ. ಜಾರ್ಜ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ, ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ಸಲೀಂ ಅಹ್ಮದ್, ಎನ್.ಎಚ್.ಕೋನರಡ್ಡಿ, ಗಿರೀಶ್ ಗದಿಗೆಪ್ಪ ಗೌಡರ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.
ಸಿದ್ದರಾಮಯ್ಯ ಅವರು ಕೇಕ್ ಕತ್ತರಿಸಿ ಮೊದಲು ಡಿ.ಕೆ.ಶಿವಕುಮಾರ ಅವರಿಗೆ ತಿನಿಸಿದರು. “ನಾವೆಲ್ಲರೂ ಒಂದೇ , ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಇರೋಣ” ಎನ್ನುವ ಸಂದೇಶವನ್ನು ಸಿದ್ದರಾಮಯ್ಯ ಜನ್ಮದಿನದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ ಮತ್ತು ಕಾಂಗ್ರೆಸ್ಸಿಗರಿಗೆ ರವಾನಿಸಿದರು
ಬುಧವಾರ ದಾವಣಗೆರೆಯಲ್ಲಿ ಸಿದ್ದರಾಮಯ್ಯನವದ 75ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. 6 ಲಕ್ಷಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸಂಸದ ರಾಹುಲ್ ಗಾಂಧಿ ಸಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





