Breaking News

ಪಿಎಸ್ ಐ ಅಕ್ರಮ : ದಿವ್ಯಾ ರಾಜೇಶ್‌ ಸಲ್ಲಿಸಿದ ಅರ್ಜಿ ವಜಾ


ಬೆಂಗಳೂರು: ಕರ್ನಾಟಕ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ವಿಜ್ಞಾನ ಶಿಕ್ಷಣ (ನಿಯಂತ್ರಣ) ಪ್ರಾಧಿಕಾರಕ್ಕೆ ಡಾ.ಎನ್‌.ರಾಮಕೃಷ್ಣ ರೆಡ್ಡಿ ಅವರನ್ನು ವಿಶೇಷ ಅಧಿಕಾರಿಯಾಗಿ ನೇಮಿಸಿದ್ದನ್ನು ಪ್ರಶ್ನಿಸಿ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣದ ಆರೋಪಿಯಲ್ಲಿ ಒಬ್ಬರಾದ ದಿವ್ಯಾ ರಾಜೇಶ್‌ ಹಾಗರಗಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳ ವಾರ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ದಿವ್ಯಾ ಪರ ವಕೀಲರು, ‘ಅರ್ಜಿದಾರರನ್ನು ಯಾವ ಕಾರಣಕ್ಕಾಗಿ ಬಂಧಿಸ ಲಾಗಿದೆ ಎಂಬ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ಇದನ್ನು ಒಪ್ಪದ ನ್ಯಾಯಪೀಠ, ‘ದಿವ್ಯಾ, ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ ನಾಮ ನಿರ್ದೇಶಿತ ಸದಸ್ಯೆಯಾಗಿದ್ದಾರೆ. ಆದರೆ, ಅವರು ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾಗಿ ಈಗ ಜೈಲಿನಲ್ಲಿದ್ದಾರೆ. ಹಾಗಾಗಿ, ಸೇವೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಈ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಅರ್ಜಿ ವಜಾಗೊಳಿಸಿತು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *