ದಾವಣಗೆರೆ : ನಗರದಲ್ಲಿ ಇಂದು ನಡೆಯಲಿರುವ ಸಿದ್ದರಾಮಯ್ಯ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಗೈರು ಹಾಜರಾಗಲಿದ್ದಾರೆ.
ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಗೈರುಹಾಜರಾಗಲಿದ್ದಾರೆ. ಮುನಿಯಪ್ಪ ಅವರು ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡಿದ್ದಾರೆ. ಕೋಲಾರ ರಾಜಕೀಯಕ್ಕೆ ಸಂಬಂಧಿಸಿದಂತೆ ಮುನಿಯಪ್ಪ ಮುನಿಸಿಕೊಂಡಿದ್ದಾರೆನ್ನಲಾಗಿದೆ. ಸಿದ್ದರಾಮಯ್ಯ ಮತ್ತು ರಮೇಶ್ ಕುಮಾರ್ ಅವರ ವಿರುದ್ಧ ಮುನಿಯಪ್ಪ ಮುನಿಸಿಕೊಂಡಿದ್ದಾರೆ. ಕೊತ್ತೂರು ಮಂಜುನಾಥ್ ಸೇರಿದಂತೆ ಇತರರ ಪಕ್ಷ ಸೇರ್ಪಡೆ ವೇಳೆಯಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಮುನಿಯಪ್ಪ ಅಸಮಾಧಾನಗೊಂಡಿದ್ದಾರೆ. ಈ ಕಾರಣದಿಂದ ಪೊಲಿಟಿಕಲ್ ಅಫೈರ್ ಕಮಿಟಿ ಸಭೆಯಿಂದಲೂ ಮುನಿಯಪ್ಪ ದೂರ ಉಳಿದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





