ದಾವಣಗೆರೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಂಗವಾಗಿ ಬುಧವಾರ ಇಲ್ಲಿ ನಡೆಯಲಿರುವ ‘ಅಮೃತ ಮಹೋತ್ಸವ’ಕ್ಕೆ ‘ದೇವನಗರಿ’ ಸಿಂಗಾರಗೊಂಡಿದೆ.
ವೇದಿಕೆ ಕಾರ್ಯಕ್ರಮ ನಡೆಯಲಿರುವ ನಗರದ ಹೊರವಲಯದ ಕುಂದವಾಡ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಾಮನೂರು ಪ್ಯಾಲೆಸ್ ಮೈದಾನ ಸಜ್ಜುಗೊಂಡಿದೆ. ಸಿದ್ದರಾಮಯ್ಯ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಬೃಹತ್ ಕಟೌಟ್‌ಗಳು, ಬ್ಯಾನರ್‌ಗಳು ಕಾರ್ಯಕ್ರಮ ನಡೆಯಲಿರುವ ವೇದಿಕೆ ಎದುರು ಸ್ವಾಗತ ಕೋರುತ್ತಿವೆ.
ವಿವಿಧೆಡೆ ಯಿಂದ ಬರುವ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಿಗೆ ಬುಧವಾರ ಬೆಳಿಗ್ಗೆ ತಿಂಡಿ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆಗಾಗಿ ಮಂಗಳವಾರ ಮಧ್ಯಾಹ್ನವೇ ಅಡುಗೆ ಸಿದ್ಧತೆ ಆರಂಭವಾಗಿದೆ. ಪಲಾವ್, ಮೊಸರನ್ನ, ಸಿಹಿ ತಿಂಡಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. 200 ಕೌಂಟರ್‌ಗಳಲ್ಲಿ ಊಟ ಬಡಿಸಲು ಸ್ವಯಂಸೇವಕರ ದಂಡು ಸನ್ನದ್ಧವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





