ಕಲಘಟಗಿ : ತಾಲೂಕಿನ ಮುಂಡಗೋಡ ರಾಜ್ಯ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸಾವನಪ್ಪಿರುವ ಘಟನೆ ಜರುಗಿದೆ . ಈ ರಸ್ತೆ ಅಪಘಾತ ಜರುಗಿತ್ತು ಕಾರು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಬೈಕ್ ಸವಾರ ಪ್ರಶಾಂತ ನೆನಕ್ಕಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿರು ಮಾಹಿತಿ ತಿಳಿದು ಬಂದಿದೆ . ಆದರೆ ಕಾರು ಎಲ್ಲಿಯದು ಎಂದು ಸಂಪೂರ್ಣ ಮಾಹಿತಿ ತಿಳಿದು ಬಂದಿಲ್ಲ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ .

bigtvnews | Hubli Dharwad News | Kannada News | Karnataka News Hubli News | News In Hubli | Local news





