ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯವು (ಇಡಿ)ದೆಹಲಿಯ ಬುಧವಾರ ಹೆರಾಲ್ಡ್ ಹೌಸ್‌ನ ಒಂದು ಭಾಗಕ್ಕೆ ಬೀಗ ಜಡಿದಿದೆ. ಅಲ್ಲದೆ, ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸಮನ್ಸ್ ಜಾರಿ ಮಾಡಿದ್ದು,’ಯಂಗ್ ಇಂಡಿಯನ್’ ಹಣ ವರ್ಗಾವಣೆ ಪ್ರಕರಣದ ತನಿಖೆ ವೇಳೆ ಹಾಜರಿರುವಂತೆ ಸೂಚಿಸಿದೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಯಂಗ್ ಇಂಡಿಯನ್’ ಪ್ರಕಾಶನ ಸಂಸ್ಥೆಗೆ ಸಂಬಂಧಿಸಿದ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯವು ಶೋಧ ಕಾರ್ಯಾಚರಣೆ ನಡೆಸಿದೆ. ಈ ಕಂಪನಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರ್ವಹಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





