ಧಾರವಾಡ : ಪಾಲಾಕ್ಷ ಲಾಡ್ಜ್‌ನಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ .
ಬೈಲಹೊಂಗಲ ತಾಲೂಕಿನ ಬಿದರಕಟ್ಟಿ ಗ್ರಾಮದ ಮಂಜುನಾಥ ನಿಂಬಾಳರ್ ( 22 ) ಎಂಬ ಯುವಕನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನು . ಈ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ .
ಘಟನಾ ಸ್ಥಳಕ್ಕೆ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ , ದೂರು ದಾಖಲಿಸಿಕೊಂಡಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





