Breaking News

ಭೀಕರ ಅಪಘಾತ : ಒಂದೇ ಕುಟುಂಬದ 6 ಜನ ಬಲಿ ಪಡೆದ ವಿಧಿ



ಯಾದಗಿರಿ:  ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ  ಸಂಭವಿಸಿದ್ದು 1 ವರ್ಷದ ಹೆಣ್ಣುಮಗು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ಹಟ್ಟಿಯವರು ಎಂದು ತಿಳಿದುಬಂದಿದೆ. ಮೃತರೆಲ್ಲರೂ ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾ ಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂರು ಜನ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೂ ಮೂರು ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆ ಗೆ ದಾಖಲಿಸಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *