Breaking News

ಬಸ್‌ ಹಾಗೂ ಲಾರಿ ಡಿಕ್ಕಿ : ವ್ಯಕ್ತಿ ಸ್ಥಳದಲೇ ಸಾವು



ದಾವಣಗೆರೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕುಂದವಾಡದ ಜಿನಿಸಿಸ್‌ ರೆಸಾರ್ಟ್‌ ಬಳಿ ಶುಕ್ರವಾರ ಮಿನಿ ಬಸ್‌ ಹಾಗೂ ಲಾರಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಿನಿ ಬಸ್‌ನಲ್ಲಿದ್ದ ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದ ಆನಂದಗೌಡ ಪಾಟೀಲ (38) ಮೃತಪಟ್ಟವರು. ಬಸ್‌ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಹಿಂದಿನಿಂದ ಬಂದ ಲಾರಿ ಮಿನಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರ‌ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *