ಮೈಸೂರು: ಪಿಎಫ್‌ಐ ಸೇರಿದಂತೆ ಪಾಕ್ ಬೆಂಬಲಿಸುವ ಸಂಸ್ಥೆಗಳನ್ನು ನಿಷೇಧಿಸಬೇಕು ಎಂಬುವವರಲ್ಲಿ ನಾನು ಒಬ್ಬ, ಇಂತಹ ಸಂಘಟನೆಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಎಸ್‌ಡಿಪಿಐ, ಕೆಎಫ್‌ಡಿ ಮತ್ತು ಪಿಎಫ್‌ಐ ಸೇರಿದಂತೆ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರ ಹಿಂಜರಿಯುವುದಿಲ್ಲ, ಕೇಂದ್ರ ಸರ್ಕಾರವೂ ಇದೇ ನಿಲುವು ಹೊಂದಿದೆ. ಆದರೆ ಒಂದು ಸಂಸ್ಥೆ ಬ್ಯಾನ್ ಮಾಡಿದರೇ ಮತ್ತೊಂದು ಹೆಸರಲ್ಲಿ ಬರುತ್ತಾರೆ. ಆದ್ದರಿಂದ ಅವರ ಲೀಡರ್‌ಗಳ ಮಾಹಿತಿ ಪಡೆದು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಬ್ಯಾನ್ ಮಾಡಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





