ಹುಬ್ಬಳ್ಳಿ – ದೇಶದೆಲ್ಲೆಡೆ ಆಜಾದಿ ಕಾ ಅಮೃತ ಮಹೋತ್ಸವದ ಕಳೆ ಬರಲಾರಂಭಿಸಿದೆ. ಪ್ರಧಾನಿ ಮೋದಿ ಅವರ ಕರೆಗೆ ಓಗೊಟ್ಟು ಮನೆ ಮನೆಯಲ್ಲಿಯಲ್ಲಿ ತ್ವಿವರ್ಣ ಧ್ವಜ ಹಾರಾಟಕ್ಕೆ ಜನತೆ ಸಿದ್ಧತೆ ಮಾಡಿಕೊಳ್ತಿದಾರೆ.
ಪಾಲಿಸ್ಟರ್ ಧ್ವಜಕ್ಕೆ ಅವಕಾಶದ ಹೊರತಾಗಿಯೂ ಖಾದಿ ರಾಷ್ಟ್ರಧ್ವಜಕ್ಕೆ ಎಲ್ಲಿಲ್ಲದ ಬೇಡಿಕೆ ವ್ಯಕ್ತವಾಗಿದೆ. ಪ್ರತಿ ವರ್ಷಕ್ಕಿಂತ ಶೇ. 25 ರಷ್ಟು ಧ್ವಜಗಳ ಮಾರಾಟ ಹೆಚ್ಚಾಗಿದ್ದು, ಹುಬ್ಬಳ್ಳಿಯ ಖಾದಿ ರಾಷ್ಟ್ರ ಧ್ವಜ ತಯಾರಿಕಾ ಘಟಕದಲ್ಲಿ ಹಗಲಿರುಳೂ ಸಿಬ್ಬಂದಿ ಧ್ವಜ ತಯಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಭಾರತ ದೇಶ ಅವಿಸ್ಮರಣೀಯ ದಿನಕ್ಕೆ ಸಾಕ್ಷಿಯಾಗುತ್ತಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ದೇಶ ಸಿದ್ಧಗೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮನೆ ಮನೆ ಮೇಲೆಯೂ ತ್ರಿವರ್ಣ ಧ್ವಜ ಹಾರಾಟ ಮಾಡಲಿ ಅಂತ ಕರೆ ನೀಡಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಖಾದಿ ರಾಷ್ಟ್ರದ ಧ್ವಜಕ್ಕೆ ಎಲ್ಲಿಲ್ಲದ ಬೇಡಿಕೆ ವ್ಯಕ್ತವಾಗಿದೆ.
ಬೆಂಗೇರಿ ಖಾದಿ ಗ್ರಾಮೋದ್ಯೋಗ ಸಂಸ್ಥೆ ಸಿಬ್ಬಂದಿ ಹಗಲು ರಾತ್ರಿ ಕೆಲಸ ಮಾಡಲಾರಂಭಿಸಿದ್ದಾರೆ. ಈ ವರ್ಷದ ಏಪ್ರಿಲ್ ನಿಂದ ಜುಲೈವರೆಗೆ 1.50 ಕೋಟಿ ರೂಪಾಯಿ ಮೌಲ್ಯದ ಧ್ವಜ ಮಾರಾಟ ಮಾಡಲಾಗಿದೆ. ಪ್ರತಿ ವರ್ಷಕ್ಕೆ ಹೋಲಿಸಿದಲ್ಲಿ ಶೇ. 25 ರಷ್ಟು ಧ್ವಜ ಮಾರಾಟ ಹೆಚ್ಚಳವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





