ಬೆಂಗಳೂರು: ರಾಜ್ಯಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಬಹುತೇಕ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಜಲಾಶಯಗಳಿಗೆ ದಾಖಲೆಯ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಬಹುತೇಕ ಎಲ್ಲಾ ಜಲಾಶಗಳು ಭರ್ತಿಯಾಗಿವೆ, ಹೆಚ್ಚುವರಿ ನೀರನ್ನು ನದಿಗಳಿಗೆ ಹರಿಸಲಾಗುತ್ತಿದ್ದು ಹಲವು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ವಿಶೇಷವಾಗಿ ತುಂಗಾ ಮತ್ತು ತುಂಗಭದ್ರಾ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿರುವ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





