Breaking News

ಜನತೆ ಕಷ್ಟದಲ್ಲಿರುವಾಗ ನನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಮನಸ್ಸು ಒಪ್ಪುತ್ತಿಲ್ಲ


ಬೆಂಗಳೂರು : ಆತ್ಮೀಯ ನನ್ನ ಹಿತೈಷಿಗಳೇ, ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅನೇಕ ಜನ ಪ್ರಾಣ ಕಳೆದುಕೊಂಡು ಆಸ್ತಿ ಪಾಸ್ತಿ ನಾಶವಾಗಿ ಸಂಕಷ್ಟದಲ್ಲಿದ್ದಾರೆ. ಜನತೆ ಕಷ್ಟದಲ್ಲಿರುವಾಗ ನನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಮನಸ್ಸು ಒಪ್ಪುತ್ತಿಲ್ಲ. ಇದು ಒಪ್ಪುವ ವಿಚಾರವಲ್ಲ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಸಚಿವ ಶ್ರೀರಾಮುಲು, ಜನರು ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಹಾರ ತುರಾಯಿ ಹಾಕಿ, ಕೇಕ್‌ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ…
ನನ್ನ ಮೇಲೆ ಅಭಿಮಾನ ಇರುವ ಹಾಗೂ ನನಗೆ ಪ್ರೀತಿ ತೋರುವ ಎಲ್ಲರೂ ನನ್ನ ಈ ಮನವಿಗೆ ಸ್ಪಂದಿಸುವಿರಿ ಎಂದು ನಂಬಿದ್ದೇನೆ, ನಿಮ್ಮ‌ಅಭಿಮಾನಕ್ಕೆ ಸದಾ ಚಿರ ಋಣಿ ಎಂದು ಬರೆದುಕೊಂಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *