Breaking News

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಅನುದಾನ ಬಿಡುಗಡೆ


ಬೆಂಗಳೂರು: ರಾಜ್ಯದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ಡ್ಯಾಮ್ ಗಳು ತುಂಬಿ ಹರಿಯುತ್ತಿವೆ. ಇದರಿಂದ ಕೆಲವು ಜಿಲ್ಲೆಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿವೆ. ಇಂತಹ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಪ್ರವಾಹ ಪೀಡಿತ 21 ಜಿಲ್ಲೆಗಳಿಗೆ ರಾಜ್ಯ ಸರ್ಕಾರವು 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು, ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಮಾನವ ಜೀವ ಹಾನಿ, ಜಾನುವಾರ ಜೀವ ಹಾನಿ, ಬೆಳೆ ಹಾನಿ, ಮನೆ ಹಾನಿ ಹಾಗೂ ಸಾರ್ವಜನಿಕ ಮೂಲ ಸೌಕರ್ಯ ಹಾನಿಯಾಗಿರುವುದರಿಂದ ರಾಜ್ಯದ 21 ಜಿಲ್ಲೆಗಳಿಗೆ 200 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *