Breaking News

ಖೋಟಾ ನೋಟು ಚಲಾವಣೆ ಆರೋಪ : ಬಿಜೆಪಿ ಸದಸ್ಯ ಸೇರಿ 3 ಜನ ಬಂಧನ..!

ಧಾರವಾಡ : ಜಿಲ್ಲೆ ಕುಂದಗೋಳ ಪಟ್ಟಣದಲ್ಲಿ ನಕಲಿ ನೋಟು ಜಾಲ ಬೇಧಿಸುವಲ್ಲಿ ಕುಂದಗೋಳ ಪೊಲೀಸರು ಯಶಸ್ವಿಯಾಗಿದ್ದಾರೆ. ಖೋಟಾ ನೋಟು ಚಲಾವಣೆ ಆರೋಪದ ಮೇಲೆ ಬಿಜೆಪಿಯ ಸಾಮಾಜಿಕ ಜಾಲ ತಾಣ ಸದಸ್ಯ ಸೇರಿ ಮೂವರನ್ನು ಕುಂದಗೋಳ ಪೊಲೀಸರು ಬಂಧಿಸಿದ್ದಾರೆ.

ಧಾರವಾಡ ಜಿಲ್ಲೆ ಕುಂದಗೋಳ ಪಟ್ಟಣದಲ್ಲಿ ನಕಲಿ ನೋಟು ಜಾಲ ಸಕ್ರಿಯವಾಗಿದೆ ಅನ್ನೋ ಖಚಿತ ಮಾಹಿತಿ ಮೇರೆಗೆ ತನಿಖೆ ನಡೆಸಿದ ಪೊಲೀಸರು, ಬಿಜೆಪಿ ಮುಖಂಡ ಸೇರಿ ಮುವ್ವರನ್ನು ಬಂಧಿಸಲಾಗಿದೆ. ಬಂಧಿತರಿಂದ 500 ರೂಪಾಯಿ ಮುಖಬೆಲೆಯ 23500 ರೂಪಾಯಿಯ 47 ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಸರಬರಾಜು ಮಾಡುತ್ತಿದ್ದರು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಕುಂದಗೋಳ ಸಿಪಿಐ ಮಾರುತಿ ಗುಳ್ಳಾರಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿ ಮುವ್ವರನ್ನು ಬಂಧಿಸಲಾಗಿದೆ. ಮುವ್ವರನ್ನೂ ನ್ಯಾಯಾಂಗ ವಶಕ್ಕೆ ಒಪ್ಪಿಸಿರೋ ಪೊಲೀಸರು, ಮತ್ತೋರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದಾರೆ.

ಕುಂದಗೋಳದಲ್ಲಿ ಹಾಲಿನ ಅಂಗಡಿ ಇಟ್ಟುಕೊಂಡಿದ್ದ ಸಾಗರ್, ಬೇರೆ ಕಡೆಯಿಂದ ಖೋಟಾ ನೋಟು ತಂದು ಕುಂದಗೋಳ, ಸುತ್ತಮುತ್ತಲು ಚಲಾವಣೆ ಮಾಡ್ತಿದ್ದ ಎನ್ನಲಾಗಿದೆ. ಹಾಲಿನ ವ್ಯಾಪಾರದ ಜೊತೆ ಖೋಟಾ ನೋಟು ದಂಧೆ ನಡೆಸುತ್ತಿದ್ದ ಎನ್ನಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *