Breaking News

ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ : ಸಂದೇಶ ರವಾನೆ

ನವದೆಹಲಿ: ಉತ್ತರ ಪ್ರದೇಶದ  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರಿಗೆ ಬಾಂಬ್ ಬೆದರಿಕೆ ಬಂದಿದೆ.

ಅಪರಿಚಿತರು ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ವಾಟ್ಸಾಪ್ ಸಹಾಯವಾಣಿಗೆ  ಜೀವ ಬೆದರಿಕೆ ಇರುವ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಜೀವ ಬೆದರಿಕೆ ಬಂದಿರುವುದರಿಂದ ಅವರ ನಿವಾಸ, ಕಚೇರಿಯ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ.

ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿಗೆ ಬಾಂಬ್ ಹಾಕುವುದಾಗಿ ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿಗೆ ವಾಟ್ಸಾಪ್ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿತ್ತು. ಸಹಾಯವಾಣಿಯ ಕಾರ್ಯ ನಿರ್ವಾಹಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸಂದೇಶ ಕಳುಹಿಸುವವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಹುಡುಕಾಟ ನಡೆಸಲಾಗುತ್ತಿದೆ. ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *