Breaking News

ಖೋ ಖೋ ಕ್ರೀಡಾಪಟು ನಿಧನ

ಶಿವಮೊಗ್ಗ: ಜ್ವರದಿಂದ ಬಳಲುತ್ತಿದ್ದ ರಾಷ್ಟ್ರೀಯ ಕ್ರೀಡಾಪಟು ನಿಧನರಾಗಿದ್ದಾರೆ. ತೀರ್ಥಹಳ್ಳಿಯ ಸೀಬಿನಕೆರೆಯ ನಿವಾಸಿ ವಿನಯ ಜ್ವರದಿಂದ ಸಾವನ್ನಪ್ಪಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ವಿನಯ್ ತೀರ್ಥಹಳ್ಳಿಯ ಖಾಸಗಿ ಆಸ್ಪತ್ರಗೆ ದಾಖಲಾಗಿದ್ದರು. ಆದರೆ, ಜ್ವರ ಇನ್ನಷ್ಟು ಹೆಚ್ಚಾದಾಗ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಜ್ವರ ನಿಯಂತ್ರಣಕ್ಕೆ ಬಾರದೇ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.‌

ವಿನಯ್ ಖೋ ಖೋ ಕ್ರೀಡಾಪಟುವಾಗಿದ್ದು, ಅನೇಕ ಪ್ರಶಸ್ತಿಗಳನ್ನು ಪಡೆದು ಕೊಂಡಿದ್ದಾರೆ. ಇವರು ತೀರ್ಥಹಳ್ಳಿಯ ಏಕಲವ್ಯ ಸ್ಪೋರ್ಟ್ಸ್ ಕ್ಲಬ್​​ನಿಂದ ಹೊರಹೊಮ್ಮಿದ ಪ್ರತಿಭೆಯಾಗಿದ್ದಾರೆ. ವಿನಯ್ ರಾಜ್ಯ ಖೋ ಖೋ ತಂಡವನ್ನು ಪ್ರತಿನಿಧಿಸುತ್ತಿದ್ದರು. ಇವರಿಗೆ ಕ್ರೀಡೆಗೆ ನೀಡುವ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ವಿನಯ್ ಅಂತಿಮ ದರ್ಶನಕ್ಕೆ ತೀರ್ಥಹಳ್ಳಿಯ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ವಿನಯ್ ನಿಧನಕ್ಕೆ ಕ್ರೀಡಾ ಪ್ರೇಮಿಗಳು, ತೀರ್ಥಹಳ್ಳಿಯ ರಾಜಕೀಯ ಮುಖಂಡರು ಕಂಬನಿ ಮಿಡಿದಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *