ಈದ್ಗಾ ಮೈದಾನ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ನಿನ್ನೆಯಷ್ಟೇ ಈದ್ಗಾ ಮೈದಾನ ಸರ್ಕಾರದ ಆಸ್ತಿ ಅಂತಾ ಬಿಬಿಎಂಪಿ ಘೋಷಿಸಿತ್ತು. ಇದರ ನಡುವೆ ಈಗ ಸ್ವಾತಂತ್ರ್ಯೋತ್ಸವ ಹತ್ತಿರ ಬರುತ್ತಿದ್ದಂತೆ ಮತ್ತೆ ವಿವಾದ ಜೋರಾಗ್ತಿದೆ.
ಈ ಮೈದಾನದಲ್ಲಿ ಧ್ವಜಾರೋಹಣ ಬಗ್ಗೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಇದರ ನಡುವೆ ಇಂದು ಚಾಮರಾಜಪೇಟೆ ಶಾಸಕ ಜಮೀರ್ ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹಾಗಾಗಿ ಮೈದಾನ ಕದನಕ್ಕೆ ಮತ್ತೆ ಜೀವ ಬಂದಿದ್ದು ಇದು ನಾಗರಿಕ ಒಕ್ಕೂಟದ ಆಕ್ರೋಶಕ್ಕೆ ಕಾರಣವಾಗಿದೆ.
ಈಗಾಗಲೇ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಸಿದ್ಧತೆ ನಡೆಯುತ್ತಿದೆ. ಹಾಗಾಗಿ ಮೈದಾನದ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ವೇಳೆ ಶಾಸಕ ಜಮೀರ್ ಅಹ್ಮದ್ ಮತ್ತೆ ಈದ್ಗಾ ಮೈದಾನ ನಮ್ಮದೇ ಅನ್ನೋ ಥರಾ ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ಸ್ವಲ್ಪ ತಣ್ಣಗಾಗಿದ್ದ ವಿವಾದವನ್ನು ಮತ್ತೆ ಸೃಷ್ಟಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





