ನಂಜನಗೂಡು/ಮೈಸೂರು : ಆರ್‌ಎಸ್‌ಎಸ್‌ನ ನಾಗಪುರದ ಕಚೇರಿಯ ಮೇಲೆ ಕಳೆದ 52 ವರ್ಷಗಳಿಂದಲೂ ಸಹ ತ್ರಿವರ್ಣ ಧ್ವಜ ಹಾರಿಸದೇ ಭಗವಧ್ವಜ ಹಾರಿಸುತ್ತಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರು ಹರ್ ಘರ್ ತಿರಂಗ ಎಂದು ಮತ್ತೊಂದು ನಾಟಕವಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ತಾಲೂಕಿನ ತಗಡೂರು ಗ್ರಾಮದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಿಜೆಪಿ, ಆರ್‌ಎಸ್‌ಎಸ್ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿಲ್ಲ, ಹೆಡಗೆವಾರ್, ಗೋವಾಲ್ಕರ್, ಸಾವರ್ಕರ್, ಬ್ರಿಟಿಷರ ವಿರುದ್ಧ ಯಾವುದೇ ಹೋರಾಟ ನಡೆಸುವುದಿಲ್ಲ ಎಂದು ಕೈಕಟ್ಟಿನಿಂತು ಮುಚ್ಚಳಿಕೆ ಬರೆದುಕೊಟ್ಟು ಜೈಲಿನಿಂದ ಬಿಡುಗಡೆ ಹೊಂದಿದವರು, ಅವರನ್ನು ಬಿಜೆಪಿ. ಆರ್‌ಎಸ್‌ಎಸ್, ವೀರ ಸಾವರ್ಕರ್ ಎಂದು ಕರೆಯುತ್ತಾರೆ. ಅಲ್ಲದೆ ತ್ರಿವರ್ಣಧ್ವಜವನ್ನು ರಾಷ್ಟ್ರೀಯ ಧ್ವಜವೆಂದು ಮಾನ್ಯತೆ ನೀಡಬಾರದು ಎಂಬುದು ಆರ್‌ಎಸ್‌ಎಸ್‌ನ ನಿಲುವಾಗಿತ್ತು. ಈ ಬಗ್ಗೆ ಆರ್‌ಎಸ್‌ಎಸ್ ಒಡೆತನದ ಪತ್ರಿಕೆ ಆರ್ಗನೈಸರ್ ವರದಿ ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





