Breaking News

ಗಣೇಶೋತ್ಸವಕ್ಕೆ ಯಾವ ನಿಯಮವಿಲ್ಲ : ಆರ್‌. ಅಶೋಕ


ಬೆಂಗಳೂರು: ಈ ವರ್ಷದ ಗಣೇಶೋತ್ಸವವನ್ನು ಕೋವಿಡ್‌ ಪೂರ್ವದಲ್ಲಿ ನಡೆಯುತ್ತಿದ್ದಂತೆ ನಡೆಸಲು ಅನುಮತಿ ನೀಡಲಾಗುವುದು, ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಈ ಸಂಬಂಧ ಮುಖ್ಯಮಂತ್ರಿಯವರ ಜತೆ ಚರ್ಚೆ ನಡೆಸಿದ್ದು ಅವರು ಇದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕಳೆದ ಎರಡು ವರ್ಷ ಕೋವಿಡ್‌ನಿಂದಾಗಿ ಸಾರ್ವಜನಿಕ ಗಣೇಶೋತ್ಸವಗಳ ಮೇಲೆ ನಿರ್ಬಂಧ ಹೇರಲಾಗಿತ್ತು. ಆಗ ಸಾರ್ವಜನಿಕರ ಪ್ರಾಣ ಉಳಿಸುವುದು ಮುಖ್ಯವಾಗಿತ್ತು. ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದರು. ಈ ಬಾರಿ ಯಾವುದೇ ರೀತಿಯ ಅಡೆತಡೆಗಳಿರುವುದಿಲ್ಲ. ಎಂದು ಹೇಳಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *