Breaking News

ಕೊಪ್ಪ-ಶೃಂಗೇರಿ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಬಿರುಕು


ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಕೊಪ್ಪ-ಶೃಂಗೇರಿ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಬಿರುಕು ಮೂಡಿದೆ.

ಶೃಂಗೇರಿ ತಾಲೂಕಿನ ಉಳುಮೆ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡು, ರಸ್ತೆ ಕುಸಿಯುವ ಭೀತಿಯಿದೆ. ಈ ಕಾರಣದಿಂದ ಹೆದ್ದಾರಿಯಲ್ಲಿ ಪಟ್ಟಿ ಅಳವಡಿಸಿ ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.

ಮಳೆಯ ಆರ್ಭಟಕ್ಕೆ ಕಾಫಿ ತೋಟ ಕೊಚ್ಚಿಹೋದ ಘಟನೆ ನಡೆದಿದೆ. ತುಂಬಳ್ಳಿಪುರ ಗ್ರಾಮದಲ್ಲಿ ಗುಡ್ಡ ಜರಿದು ತೋಟ ಸರ್ವನಾಶವಾಗಿದೆ. ಇಲ್ಲಿನ ಅಣ್ಣಪ್ಪ ಶೆಟ್ಟಿ ಎಂಬುವರಿಗೆ ಸೇರಿದ ಕಾಫಿ ತೋಟ ಕೊಚ್ಚಿಹೋಗಿದ್ದು, ಹೊಸ ಹಳ್ಳ ಕೊಳ್ಳಗಳು ತೋಟದಲ್ಲಿ ಸೃಷ್ಟಿಯಾಗಿದೆ. ರಾತ್ರಿ ಬೆಳಗಾಗುವುದರೊಳಗೆ ತೋಟದ ಸ್ಥಿತಿ ಕಂಡು ರೈತರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ರೈತರು ಒತ್ತಾಯಿಸಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *