ಹುಬ್ಬಳ್ಳಿ : ಮನನೊಂದ ವ್ಯಕ್ತಿಯೊಬ್ಬ ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ .
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರು ಎಂಬುದು ತಿಳಿದು ಬಂದಿಲ್ಲ . ಸುಮಾರು 60-65 ವಯೋಮಿತಿ ಹೊಂದಿದ ವ್ಯಕ್ತಿ . ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ .
ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ . ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ . ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





