Breaking News

ದಾಖಲೆಗಳನ್ನು ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1,2,3 ಇವೆ ಬಿಚ್ಚಲೇ : ಎಚ್ ಡಿಕೆ

ಬೆಂಗಳೂರು: ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ, ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ? ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ? ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ವಿರುದ್ಧ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಡಾ.ಅಶ್ವತ್ಥನಾರಾಯಣ @ ನಕಲಿ ಸರ್ಟಿಫಿಕೇಟ್‌ ರಾಜʼ @ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ!! ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು, ಜಾಣ ಕುರುಡಾದರೂ ಇರಬೇಕು ಎಂದು ಕಿಡಿಕಾರಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *