Breaking News

ಭೀಕರ ಅಪಘಾತ : 20ಕ್ಕೂ ಹೆಚ್ಚು ಜನರಿಗೆ ಗಾಯ


ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ 20ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರೋ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ಬಸ್ ನಲ್ಲಿದ್ದಂತ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಲ್ಲದೇ ಐವರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ.

ಇನ್ನೂ ಗಾಯಾಳುಗಳನ್ನು ಜಗಳೂರು ಹಾಗೂ ದಾವಣಗೆರೆ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂದಹಾಗೇ ಖಾಸಗಿ ಬಸ್ ಬೆಂಗಳೂರಿನಿಂದ ಸಿಂಧಗಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *