ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರಿ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ನಡೆದಿದೆ.
ಸರಿತಾ(37), ಚಂದ್ರಮ್ಮ(55) ಮೃತಪಟ್ಟವರು ಎಂದು ಹೇಳಲಾಗಿದೆ. ನಿರಂತರ ಮಳೆಯಾಗಿದ್ದರಿಂದ ಸಡಿಲಗೊಂಡ ಮರ ಮನೆ ಮೇಲೆ ಮುರಿದು ಬಿದ್ದಿದೆ. ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ದೌಡಾಯಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





