ಬೆಳಗಾವಿ : ಅತಿವೃಷ್ಟಿಯಿಂದ ಮನೆಹಾನಿ ಅಥವಾ ಮನೆಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದರು.
ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಳ್ಳಲಾದ ಕ್ರಮಗಳ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಆ.10) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಾವುದೇ ಕುಟುಂಬಗಳು 2019 ರ ನಂತರ ಮನೆ ಬಿಟ್ಟು ಬೇರೆ ಕಡೆ ಇದ್ದಾಗಲೂ ಅಂತಹ ಖಾಲಿ ಮನೆಗಳು ಬಿದ್ದರೂ ಕೂಡ ಅಂತಹ ಕುಟುಂಬಗಳಿಗೂ ಮನೆಹಾನಿ ಪರಿಹಾರವನ್ನು ಬಿಡುಗಡೆಗೊಳಿಸಬೇಕು ಎಂದು ಸಚಿವರು ತಿಳಿಸಿದರು. 24 ಗಂಟೆಗಳಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





